ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನಾಂಬೆ ಉತ್ಸವಕ್ಕೆ ಸಿದ್ಧತೆ ಪೂರ್ಣ - ಸಚಿವ ಕೆ. ಎನ್ ರಾಜಣ್ಣ

ಹಾಸನ: ಪ್ರತೀ ವರ್ಷದಂತೆ ಈ ಬಾರಿಯೂ ಹಾಸನದ ಅಧಿದೇವತೆ ಹಾಸನಾಂಬ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲು ಶೇಕಡಾ 90 ರಷ್ಟು ಸಿದ್ಧತೆ ಪೂರ್ಣಗೊಂಡಿದೆ ಎಂದು ಸಹಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್ ರಾಜಣ್ಣ ಹೇಳಿದರು..

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಅ.24 ರಿಂದ ನ. 3 ರ ವರೆಗೆ ಉತ್ಸವ ನಡೆಯಲಿದ್ದು ಮೊದಲ ಹಾಗೂ ಕೊನೆಯ ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರುವುದಿಲ್ಲ ಇನ್ನುಳಿದಂತೆ 9 ದಿನ ಸಾರ್ವಜನಿಕ ದರ್ಶನಕ್ಕೆ ಎಲ್ಲಾ ರೀತಿಯ ಅಗತ್ಯ ಸಿದ್ಧತೆ ಹಾಗೂ ಮೂಲಭೂತ ಸೌಕರ್ಯ ಗಳನ್ನು ಕಲ್ಪಿಸಲಾಗಿದೆ ಎಂದರು.

ವಿದ್ಯುತ್, ಕುಡಿಯುವ ನೀರು, ಸರದಿ ಸಾಲಿನಲ್ಲಿ ನಿಲ್ಲುವ ಭಕ್ತರಿಗೆ ಏನೆಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳ ಅಗತ್ಯ ಇದೇ ಎಲ್ಲವನ್ನೂ ಪೂರೈಸಿ ಭಕ್ತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಮುಂಜಾಗ್ರತ ಕ್ರಮ ಕೈಗೊಳ್ಳುವ ಬಗ್ಗೆ ಈಗಾಗಲೇ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಲಾಗಿದೆ ಎಂದರು.

ಬಾಗಿಲು ತೆರೆಯುವ ಮೊದಲ ದಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಠಾಧೀಶರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಸಿದ್ದಗಂಗಾ ಮಠದ ಶ್ರೀಗಳು ಆಗಮಿಸಿ ಗರ್ಭಗುಡಿಯ ಬಾಗಿಲು ತೆರಳಿದ್ದಾರೆ ಬಳಿಕ ಉತ್ಸವ ಮುಗಿಯುವ ಒಳಗೆ ಹಾಸನಾಂಬೆ ದರ್ಶನಕ್ಕೆ ಈ ಬಾರಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

Edited By : PublicNext Desk
Kshetra Samachara

Kshetra Samachara

21/10/2024 04:24 pm

Cinque Terre

240

Cinque Terre

0

ಸಂಬಂಧಿತ ಸುದ್ದಿ