ಹಾಸನ : ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿ ನಗರಸಭೆ ಸದಸ್ಯರನ್ನು ಕಡೆಗಣಿಸಲಾಗಿದೆ ಹಾಗೂ ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಪೌರಕಾರ್ಮಿಕರು ಹಾಗೂ ನಗರಸಭೆಯ ಸದಸ್ಯರು ದೇವಸ್ಥಾನದ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಹಾಸನಾಂಬೆ ಜಾತ್ರಾ ಮಹೋತ್ಸವದಿಂದ ಹೊರಗುಳಿದಿರುವ ಪೌರಕಾರ್ಮಿಕರು, ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರು, ಹಾಸನಾಂಬೆ ದೇವಾಲಯದ ಬ್ಯಾರಿಕೇಡ್ ತಳ್ಳಿ ನುಗ್ಗಲು ಯತ್ನಿಸಿದ್ದಾರೆ. ಪೊಲೀಸರು ಹಾಗೂ ಪೌರಕಾರ್ಮಿಕರು ಹಾಗೂ ನಗರಸಭೆ ಸದಸ್ಯರ ನಡುವೆ ನೂಕಾಟ ತಳ್ಳಾಟ ನಡೆದಿದೆ.
ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು ಹಾಸನಾಂಬ ದೇವಾಲಯದ ಆವರಣದಲ್ಲಿ ಇನ್ನು ಮುಂದೆ ಸ್ವಚ್ಛತೆ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಇದರಿಂದಾಗಿ ಹಾಸನಂಬೆ ದೇವಾಲಯದ ಆವರಣದಲ್ಲಿ ರಾಶಿ ರಾಶಿ ಕಸ ಬಿದ್ದಿದೆ.
PublicNext
31/10/2024 07:00 pm