ಬೇಲೂರು : ಹಾಡುಹಗಲೇ ಗುಂಪು ಗುಂಪಾಗಿ ಕಾಡಾನೆಗಳ ಹಿಂಡು ರಸ್ತೆ ದಾಟಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಕೆಸಗೋಡು ಗ್ರಾಮದಲ್ಲಿ ನಡೆದಿದೆ.
ರಸ್ತೆಯಲ್ಲಿ ಕಾಡಾನೆಗಳನ್ನು ಕಂಡು ವಾಹನಗಳನ್ನು ನಿಲ್ಲಿಸಿಕೊಂಡು ನಿಂತ ಸವಾರರು ಕಾಡಾನೆಗಳು ಸಂಚರಿಸುತ್ತಿರುವ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ರಸ್ತೆ ದಾಟಿ ಕಾಫಿ ತೋಟದೊಳಗೆ ಕಾಡಾನೆಗಳ ಹಿಂಡು ಹೋಗಿದ್ದು
ಕಾಡಾನೆ ಕಂಡು ಆತಂಕಗೊಂಡಿರುವ ಸ್ಥಳೀಯರು
ಶಾಶ್ವತ ಪರಿಹಾರ ಕಂಡು ಹಿಡಿಯದ ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Kshetra Samachara
01/11/2024 08:17 pm