ಹಾವೇರಿ: ನಗರದ ಬಸ್ ನಿಲ್ದಾಣದ ಬಳಿ ಭೀಕರ ಅವಘಡ ಸಂಭವಿಸಿದೆ. ಪಾದಚಾರಿ ವೃದ್ಧನ ಕಾಲುಗಳ ಮೇಲೆ ಬಸ್ ಹರಿದಿದೆ. ಪರಿಣಾಮ ವೃದ್ದನ ಎರಡು ಕಾಲುಗಳು ಕಟ್ ಆಗಿ, ರಸ್ತೆಯಲ್ಲೇ ರಕ್ತಸಿಕ್ತವಾಗಿ ವೃದ್ಧ ನರಳಾಡಿದ್ದಾರೆ.
ಹಾವೇರಿ ತಾಲೂಕಿನ ಕನಕಾಪುರ ಗ್ರಾಮದ ಕರಿಯಪ್ಪ ಮುಚ್ಚಿಕೊಪ್ಪ (60) ಎಂಬುವರ ಎರಡು ಕಾಲುಗಳು ಕಟ್ ಆಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಹಾವೇರಿ ಶಹರ ಪೊಲೀಸರು ಬಸ್ ಚಾಲಕ ಮಲ್ಲಿಕಸಾಬ್ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿಯೇ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಶಹರ ಮತ್ತು ಸಂಚಾರಿ ಠಾಣೆ ಪೊಲೀಸರು ಪರಿಸ್ಥಿತಿ ಶಾಂತಗೊಳಿಸಿದರು. ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದೆ.
PublicNext
19/11/2024 09:18 pm