ಶಿಗ್ಗಾವಿ: ತಾಲೂಕಿನ ಮಲ್ಲನಾಯಕನಕೊಪ್ಪ ಗ್ರಾಮ ಅಭಿವೃದ್ಧಿ ಕಾಣದೆ ಸುಮಾರು ವರ್ಷಗಳೇ ಕಳೆದಿವೆ. ಇದುವರೆಗೆ ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಇತ್ತ ಕಡೆ ಗಮನವೇ ಹರಿಸಿಲ್ಲ!
ಗ್ರಾಮದಲ್ಲಿ ಗಟಾರಗಳು ತುಂಬಿ ಗಬ್ಬು ನಾರುತ್ತಿದ್ದು, ಈಗಾಗಲೇ ಸುಮಾರು18ರಿಂದ 25 ಜನರು ಡೆಂಗ್ಯೂ ಜ್ವರಕ್ಕೆ ತುತ್ತಾಗಿದ್ದಾರೆ.
ಗ್ರಾಮಸ್ಥರು ಮೂಗು ಮುಚ್ಚಿಕೊಂಡೇ ಓಡಾಡುವ ಪರಿಸ್ಥಿತಿ ಬಂದೊದಗಿದೆ. ಅಧಿಕಾರಿಗಳಿಗೆ ಹೇಳಿದರೆ ಹಾರಿಕೆ ಉತ್ತರವನ್ನಷ್ಟೇ ನೀಡುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.
ಇಲ್ಲಿನ ಶಾಲಾ ಮಕ್ಕಳಿಗೆ ಡೆಂಗ್ಯೂ ಜ್ವರ ಬಾಧಿಸಿದ್ದರೂ ಗ್ರಾಮ ಪಂಚಾಯತಿ ಮಾತ್ರ ಕಣ್ಣಮುಚ್ಚಿ ಕುಳಿತು ಕೊಂಡಿದೆ. ಗ್ರಾಮ ಪಂಚಾಯತಿ ಅಧಿಕಾರಿಗಳು ಸಾರ್ವಜನಿಕರೊಡನೆ ಕೇವಲವಾಗಿ ಮಾತನಾಡುತ್ತಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಯಾವಾಗಲಾದರೂ ಒಮ್ಮೆ ಮಾತ್ರ ಅಧಿಕಾರಿಗಳು ಬಂದು ಗ್ರಾಮ ಸಭೆ ನಡೆಸಿ ಹೋಗುತ್ತಾರೆ. ಸ್ವಚ್ಛತೆ ಕಾರ್ಯ ನಿರ್ವಹಣೆ ಮಾಡಲಾಗಿದೆ ಎಂದು ಬಿಲ್ ಪಾಸ್ ಮಾಡುತ್ತಾರೆ. ಆದರೆ, ಯಾವುದೇ ಅಭಿವೃದ್ಧಿ ಕಾರ್ಯ ಆಗುವುದಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.
PublicNext
03/10/2024 09:04 am