ಹಾವೇರಿ : ಹಾವೇರಿ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಸ್ವಲ್ಪ ಕಡಿಮೆಯಾಗಿದೆ. ಕಳೆದ ಕೆಲ ದಿನಗಳಿಂದ ಸುರಿದ ಮಳೆಗೆ ಹಾವೇರಿ ತಾಲೂಕು ಸಂಗೂರು ಗ್ರಾಮದಲ್ಲಿ ಮನೆಯ ಮೇಲ್ಚಾವಣಿ ಕುಸಿದಿದೆ. ಮನೆ ಮತ್ತು ದನಕೊಟ್ಟಿಗಿಗೆ ಸಂಪೂರ್ಣ ಹಾನಿಯಾಗಿದೆ.
ರಾಮಣ್ಣ ಕಂಠಿ ಎಂಬುವರಿಗೆ ಸೇರಿದ ಮನೆ ಸಂಪೂರ್ಣ ಕುಸಿದಿದೆ.ಮನೆಯಲ್ಲಿದ್ದದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯ ವಸ್ತುಗಳು ಹಾಗೂ ಕೃಷಿ ಉಪಕರಣಗಳು ಸಂಪೂರ್ಣ ಹಾಳಾಗಿವೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮನೆಯಲ್ಲಿದ್ದ ತುಂಬುಗರ್ಭಿಣಿ ಮತ್ತು ಮಗು ಪಾರಾಗಿದೆ.
PublicNext
25/07/2024 03:04 pm