ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿಗ್ಗಾಂವ: ಬೈಕ್ ಅಪಘಾತದಲ್ಲಿ ಕಾನ್‌ಸ್ಟೇಬಲ್ ಸಾವು

ಶಿಗ್ಗಾಂವ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರಿ ಮಾಡುತ್ತಿದ್ದ ಪೊಲೀಸ್ ಕಾನ್‌ಸ್ಟೇಬಲ್ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಶಿಗ್ಗಾಂವ ತಾಲೂಕಿನ ಹನಮರಹಳ್ಳಿ ಗ್ರಾಮದ ಸಮೀಪ ಶುಕ್ರವಾರ ಸಂಜೆ ಸಂಭವಿಸಿದೆ.

ಶಿಗ್ಗಾಂವಿ ಠಾಣೆಯ ಕಾನ್‌ಸ್ಟೆಬಲ್‌ ಚನ್ನಪ್ಪ ದೊಡ್ಡಪ್ಪ ಸಂಶಿ (56)ಮೃತಪಟ್ಟವರು. ತಾಲೂಕಿನ ಚಿಕ್ಕಮಲ್ಲೂರ ಗ್ರಾಮದ ನಿವಾಸಿ ಚನ್ನಪ್ಪ ಸಂಶಿ ನಿವೃತ್ತ ಸೈನಿಕನಾಗಿ ಬಳಿಕ ಪೊಲೀಸ್‌ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಶುಕ್ರವಾರ ಠಾಣೆಯಿಂದ ಸಮನ್ಸ್ ಜಾರಿ ಮಾಡಲು ಬೈಕ್‌ನಲ್ಲಿ ಹೋಗುತ್ತಿದ್ದಾಗ ಹನುಮರಹಳ್ಳಿ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕುರಿತು ಶಿಗ್ಗಾಂವಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By :
PublicNext

PublicNext

08/10/2022 02:27 pm

Cinque Terre

25.89 K

Cinque Terre

0