ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ಶಿಗ್ಗಾವಿ ಉಪ ಚುನಾವಣೆ - ಮೂವರಿಂದ ನಾಲ್ಕು ನಾಮಪತ್ರ ಸಲ್ಲಿಕೆ

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ನಾಮಪತ್ರ ಸಲ್ಲಿಕೆಯ ಮೊದಲ ದಿನವೇ ಮೂರು ಅಭ್ಯರ್ಥಿಗಳಿಂದ 4 ನಾಮಪತ್ರ ಸಲ್ಲಿಕೆಯಾಗಿವೆ.

ಹಿಂದೂಸ್ತಾನ ಜನತಾ ಪಕ್ಷದಿಂದ ಶಿವಕುಮಾರ್ ತಳವಾರ ಎರಡು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕರ್ನಾಟಕ ರಾಷ್ಟ್ರಸಮಿತಿಯಿಂದ ರವಿ ಕೃಷ್ಣಾರೆಡ್ಡಿ ಒಂದು, ಸೋಸಿಯಾಲಿಸ್ಟ್ ಪಾರ್ಟಿಯಿಂದ ಖಾಜಾಮೋಹಿದ್ದಿನ್ ಗುಡಗೇರಿ ಒಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಚುನಾವಣಾಧಿಕಾರಿ ಮಹ್ಮದ್ ಖಿಜರ್ ಅವರಿಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಕ್ಟೋಬರ್‌ 25ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಇನ್ನು ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಅಕ್ಟೋಬರ್‌ 28 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಕ್ಟೋಬರ್‌ 30 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ.

Edited By : Vijay Kumar
Kshetra Samachara

Kshetra Samachara

18/10/2024 08:38 pm

Cinque Terre

13.72 K

Cinque Terre

0

ಸಂಬಂಧಿತ ಸುದ್ದಿ