ಹಾವೇರಿ: ಈಗಾಗಲೇ ಹೋರಾಟಕ್ಕೆ ಚಾಲನೆ ನೀಡಿದ್ದೇವೆ. ಇಂದು ಸದನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ನಿರ್ಧಾರವನ್ನು ತೆಗೆದುಕೊಳ್ಳದೆ ಇದ್ದರೇ ಪಂಚಮಸಾಲಿ ಸಮುದಾಯದಿಂದ ರಾಜ್ಯ ಸರ್ಕಾರಕ್ಕೆ ತಕ್ಕ ಪಾಠವನ್ನು ಕಲಿಸುವುದು ಖಂಡಿತ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಸಾಕಷ್ಟು ಸಲ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಹೋರಾಟ ಮಾಡಿದ್ದೇವೆ ಆದರೂ ಕೂಡ ಕಿಂಚಿತ್ತೂ ಕಾಳಜಿ ವಹಿಸಿಲ್ಲ. ಇಂದು ಸದನದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳದೇ ನಮ್ಮ ಹೋರಾಟಕ್ಕೆ ಸ್ಪಂದಿಸದೇ ಇದ್ದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.
ಸಭಾಪತಿಗಳು ಬಸನಗೌಡ ಪಾಟೀಲ ಯತ್ನಾಳ ಹಾಗೂ ಪಂಚಮಸಾಲಿ ಸಮುದಾಯದ ಶಾಸಕರಿಗೆ ಮಾತನಾಡಲು ಅವಕಾಶ ಮಾಡಿಕೊಡದೇ ಇರುವುದು ನಿಜಕ್ಕೂ ಬೇಸರದ ಸಂಗತಿಯಾಗಿದ್ದು, ಇಂದು ನಮ್ಮ ಸಮಾಜದ ಮುಖಂಡರಿಗೆ ಸದನದಲ್ಲಿ ಮಾತನಾಡಲು ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.
PublicNext
20/09/2022 03:15 pm