ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ಸಿಎಂ ಮನೆ ಮುತ್ತಿಗೆಗೆ ಕ್ಷಣಗಣನೆ; ಹೋರಾಟಕ್ಕೆ ಬರುತ್ತಿದೆ ಜನಸಾಗರ

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಕೂಡಲಸಂಗಮ ಸ್ವಾಮೀಜಿ ನೇತೃತ್ವದಲ್ಲಿ ಸಿಎಂ ಮನೆಯ ಮುತ್ತಿಗೆ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸಾಗರೋಪಾದಿಯಲ್ಲಿ ಜನರು ಹೋರಾಟಕ್ಕೆ ಆಗಮಿಸುತ್ತಿದ್ದಾರೆ.

ಹೌದು... ಸುತ್ತಮುತ್ತಲಿನ ಜಿಲ್ಲೆಯಿಂದ ಜನರು ಆಗಮಿಸುತ್ತಿದ್ದು, ಹೋರಾಟಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದರ ಬೆನ್ನಲ್ಲೇ ಸಿಎಂ ಮನೆಯ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ನಿಯೋಜನೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ನಿನ್ನೆಯಿಂದಲೇ ಶಿಗ್ಗಾಂವದಲ್ಲಿರುವ ಸಿಎಂ ನಿವಾಸಕ್ಕೆ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಸವಣೂರು ರಸ್ತೆಯಲ್ಲಿಯೇ ಹೋರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.

Edited By :
PublicNext

PublicNext

20/09/2022 01:08 pm

Cinque Terre

20.62 K

Cinque Terre

0