ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹೋರಾಟದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಶಿಗ್ಗಾಂವದ ಹೃದಯ ಭಾಗದಲ್ಲಿರುವ ಚೆನ್ನಮ್ಮ ವೃತ್ತದಲ್ಲಿ ಜಮಾವಣೆಗೊಂಡಿದ್ದು, ಸಮುದಾಯದ ಮುಖಂಡರು ನೇಗಿಲಯೋಗಿ ಹಾಡಿಗೆ ಧ್ವನಿಗೂಡಿಸುವ ಹೋರಾಟಕ್ಕೆ ಮುಂದಾಗಿದ್ದಾರೆ.
ಹೌದು...ಬೆಳಿಗ್ಗೆಯಿಂದಲೇ ಆಗಮಿಸಿದ ಸಮಾಜದ ಕಾರ್ಯಕರ್ತರು ಸುಡುವ ಬಿಸಿಲನ್ನು ಲೆಕ್ಕಿಸದೇ ಘೋಷಣೆ ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಳಿಗ್ಗೆ 10 ಗಂಟೆಗೆ ಆರಂಭವಾಗಬೇಕಿದ್ದ ಹೋರಾಟ ಎರಡು ಗಂಟೆ ಕಾಲ ವಿಳಂಬವಾಗಿದ್ದರೂ ಕೂಡ ಆರಂಭವಾಗುವ ಲಕ್ಷಣ ಕಾಣುತ್ತಿಲ್ಲ.
PublicNext
20/09/2022 03:40 pm