ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ಹೋರಾಟಕ್ಕೆ ಹಸಿರು ನಿಶಾನೆ; ಸಿಎಂ ಮನೆಯತ್ತ ಹೊರಟ ಮೀಸಲಾತಿ ಹೋರಾಟ

ಪಂಚಮಸಾಲಿ ಸಮುದಾಯಕ್ಕೆ 2ಎ‌ ಮೀಸಲಾತಿಗಾಗಿ ಹೋರಾಟಕ್ಕೆ ಶಿಗ್ಗಾಂವ ಚೆನ್ನಮ್ಮ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಮಾಜದ ಬಾಂಧವರು ಜಮಾವಣೆಗೊಂಡಿದ್ದು, ಚನ್ನಮ್ಮನಿಗೆ ಮಾಲಾರ್ಪಣೆ ಮಾಡಿ ಪ್ರತಿಭಟನಾ ರ್ಯಾಲಿಗೆ‌ ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮೀಜಿ ವಿದ್ಯುಕ್ತವಾಗಿ ಚಾಲನೆ ನೀಡಿದರು.

ಇನ್ನೂ ಹಸಿರು ವಸ್ತ್ರವನ್ನು ಸಮಾಜ ಬಾಂಧವರ ಕಡೆಗೆ ಬೀಸುವ ಮೂಲಕ ಹೋರಾಟಕ್ಕೆ ಚಾಲನೆ ನೀಡಿದ್ದು, ಈ ಹೋರಾಟದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಸೇರಿದಂತೆ ಅನೇಕ ನಾಯಕರು ಭಾಗಿಯಾಗಿದ್ದರು. ಸಾಗರೋಪಾದಿಯಲ್ಲಿ ಸಮಾಜ ಬಾಂಧವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ರ್ಯಾಲಿಯ ಉದ್ದಕ್ಕೂ ಘೋಷಣೆಗಳು ಮೊಳಗಿದವು.

Edited By :
PublicNext

PublicNext

20/09/2022 04:02 pm

Cinque Terre

21.81 K

Cinque Terre

0