ಬೆಂಗಳೂರು: ಕೊರೊನಾವೈರಸ್ ಸೋಂಕಿನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಗುಣಮುಖ ಪ್ರಕರಣಗಳು ಹೆಚ್ಚಾಗುವುತ್ತಿರುವುದು ಒಂದು ಕಡೆಯಾದರೆ ಸಾವಿನ ಸಂಖ್ಯೆಯಲ್ಲೂ ಏರಿಕೆ ಕಂಡು ಬರುತ್ತಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 10,453 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದು ರಾಜ್ಯದಲ್ಲಿ ಒಂದು ದಿನದಲ್ಲಿ ಅತೀ ಹೆಚ್ಚು ಸೋಂಕು ಪತ್ತೆಯಾದ ದಾಖಲೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 5.92ಲಕ್ಷ ಕ್ಕೆ ಏರಿಕೆಯಾಗಿದೆ.
ಇನ್ನು ಮಂಗಳವಾರ 136 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ದೇಶದಲ್ಲಿ ಅತೀ ಹೆಚ್ಚು ಸಕ್ರಿಯ ಪ್ರಕರಣಗಳ ಪಟ್ಟಿಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.
ಸೋಂಕಿತರ ಸಂಖ್ಯೆಗಿಂತಲೂ ಸಾವಿನ ಸಂಖ್ಯೆ ಹೆಚ್ಚಾದರೆ, ಆತಂಕಪಡಬೇಕಿದೆ. ಸೋಮವಾರದವರೆಗೂ ರಾಜ್ಯದಲ್ಲಿ ಸಾವಿನ ಪ್ರಮಾಣ ಶೇ.1.48ರಷ್ಟಿದೆ. ಕೆಲ ದಿನಗಳಿಂದ ಈ ಪ್ರಮಾಣ ಇಳಿಕೆ ಕಾಣುತ್ತಿದೆ ಎಂದು ವರದಿಗಳು ತಿಳಿಸಿವೆ.
PublicNext
30/09/2020 10:54 am