ಬೆಂಗಳೂರು: ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು. ಇಂದು ಮತ್ತೆ 8811 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 5,66,023ಕ್ಕೆ ಏರಿಕೆಯಾಗಿದೆ.
ಇನ್ನೂ ಡೆಡ್ಲಿ ಸೋಂಕಿನಿಂದ ಸುಧಾರಿಸಿಕೊಂಡ 5417 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 4,55,719 ಮಂದಿ ಕೊರೊನಾದಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇಂದು 86 ಸೋಂಕಿತರು ಮೃತಪಟ್ಟಿದ್ದು, ಇಲ್ಲಿಯವರೆಗೆ 8,503 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 1,01,782 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 27 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 2821 ಕ್ಕೆ ಏರಿಕೆಯಾಗಿದೆ.
PublicNext
26/09/2020 08:58 pm