ತಿರುವನಂತಪುರಂ: ಕೇರಳದ ತಿರುವನಂತಪುರಂನ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದ 10 ಅರ್ಚಕರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಅಕ್ಟೋಬರ್ 15 ರವರೆಗೆ ದೇವಸ್ಥಾನ ಬಂದ್ ಮಾಡಲಾಗಿದೆ.
ದೇವಾಲಯದ ಅಧಿಕಾರಿಗಳ ಪ್ರಕಾರ, ದೈನಂದಿನ ಪೂಜೆಯನ್ನು ನಡೆಸುತ್ತಾರೆ. ಆದರೆ ಭಕ್ತರಿಗೆ ದೇವಸ್ಥಾನ ಪ್ರವೇಶಿಸಲು ಅನುಮತಿ ಇಲ್ಲ.
ಲಾಕ್ ಡೌನ್ ನಂತರ ಆಗಸ್ಟ್ 27ರಿಂದ ದೇವಾಲಯವನ್ನು ಮತ್ತೆ ತೆರೆಯಲಾಗಿತ್ತು.
ದೇವಾಲಯ ಮತ್ತೆ ತೆರೆದ ನಂತರ ದೇವಸ್ಥಾನದ ಹಲವು ಸಿಬ್ಬಂದಿ ಮತ್ತು ಅರ್ಚಕರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಈಗ ದೇವಸ್ಥಾವನ್ನು ಮತ್ತೆ ಕೆಲವು ದಿನಗಳವರೆಗೆ ಬಂದ್ ಮಾಡಲು ನಿರ್ಧರಿಸಲಾಗಿದೆ.
PublicNext
09/10/2020 05:28 pm