ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ರಾಜ್ಯದಲ್ಲಿಂದು ಬರೋಬ್ಬರಿ 10,913 ಹೊಸ ಕೊರೊನಾ ಕೇಸ್ ಪತ್ತೆ : 114 ಜನ ಸಾವು

ಬೆಂಗಳೂರು: ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 114 ಜನರು ಬಲಿಯಾಗಿದ್ದು , ರಾಜ್ಯದಲ್ಲಿ ಸಾವಿನ ಸಂಖ್ಯೆ 9789 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಹೊಸದಾಗಿ 10,913 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 6,90,652ಕ್ಕೆ ಏರಿಕೆಯಾಗಿದೆ.

ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈವರೆಗೆ 5,61,610 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 1,18,851 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ.

ಇದರಲ್ಲಿ 873 ಜನರನ್ನು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಗುಣಮುಖರಾಗಿ 9,091ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 5,009 ಜನರಿಗೆ ಸೋಂಕು ತಗುಲಿದ್ದು, ಒಟ್ಟಾರೆ 2,06,976 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 2.72 ಲಕ್ಷದ ಗಡಿ ದಾಟಿದೆ. ಇಂದು 57 ಜನರು ಮೃತಪಟ್ಟಿದ್ದು, ಈವರೆಗೂ 3,290 ಮಂದಿ ಸಾವಿಗೀಡಾಗಿದ್ದಾರೆ.

ಬಾಗಲಕೋಟೆಯಲ್ಲಿ 76, ಬಳ್ಳಾರಿ 217, ಬೆಳಗಾವಿ 269, ಬೆಂಗಳೂರು ಗ್ರಾಮಾಂತರ 242, ಬೀದರ್ 57, ಚಾಮರಾಜನಗರ 72, ಚಿಕ್ಕಬಳ್ಳಾಪುರ 154, ಚಿಕ್ಕಮಗಳೂರು 129, ಚಿತ್ರದುರ್ಗ 418, ದಕ್ಷಿಣ ಕನ್ನಡ 376, ದಾವಣಗೆರೆ 450, ಧಾರವಾಡ 150, ಗದಗ 68, ಹಾಸನ 489, ಹಾವೇರಿ 75, ಕಲಬುರಗಿ 144, ಕೊಡಗು 31, ಕೋಲಾರ 156, ಕೊಪ್ಪಳ 65, ಮಂಡ್ಯ 250, ಮೈಸೂರು 826, ರಾಯಚೂರು 73, ರಾಮನಗರ 125, ಶಿವಮೊಗ್ಗ 140, ತುಮಕೂರು 366, ಉಡುಪಿ 177, ಉತ್ತರ ಕನ್ನಡ 196, ವಿಜಯಪುರ 92 ಮತ್ತು ಯಾದಗಿರಿಯಲ್ಲಿ 66 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಹೊಸ ಪ್ರಕರಣಗಳು ಪತ್ತೆಯಾಗಿದೆ.

Edited By : Nirmala Aralikatti
PublicNext

PublicNext

09/10/2020 08:22 pm

Cinque Terre

66.31 K

Cinque Terre

1