ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಕೊರೋನಾ ಸೋಂಕಿನಿಂದ ಹೋಂ ಕ್ವಾರಂಟೈನ್‌ನಲ್ಲಿದ್ದ ಸಚಿವರು ದಿಢೀರ್ ಆಸ್ಪತ್ರೆಗೆ ಶಿಫ್ಟ್..!

ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಎಸ್.ಸುರೇಶ್ ಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಕ್ಟೋಬರ್ 5ರಂದು ಕೊರೋನಾ ಪರೀಕ್ಷೆಗೆ ಒಳಗಾಗಿದ್ದ ಸಚಿವ ಎಸ್ ಸುರೇಶ್ ಕುಮಾರ್ ಅವರಿಗೂ ಪಾಸಿಟಿವ್ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಸುರೇಶ್ ಕುಮಾರ್ ಅವರು ಹೋಂ ಕ್ವಾರಂಟೈನ್ ನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು.

ಆದ್ರೆ, ಇಂದು (ಶನಿವಾರ) ಸಂಜೆ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರ ಸಲಹೆ ಮೇರೆಗೆ ಜಯನಗರದ ಬಿಐಜಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

Edited By : Raghavendra K G
PublicNext

PublicNext

10/10/2020 06:13 pm

Cinque Terre

65.77 K

Cinque Terre

13