ಬೆಂಗಳೂರು: ಮೈಸೂರು ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ವೈದ್ಯರಿಗೆ ಆಹ್ವಾನ ನೀಡಿದ್ದಾರೆ. ಹೀಗಾಗಿ ಸರ್ಕಾರದ ಗೌರವಕ್ಕೆ ನಾನು ಆಭಾರಿಯಾಗಿರುತ್ತೇನೆ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಮಂಜುನಾಥ್ ಸಂತಸ ವ್ಯಕ್ತಪಡಿಸಿದ್ದಾರೆ.
ಮೈಸೂರು ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ನೇತೃತ್ವದ ತಂಡವು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯ ಅತಿಥಿಯಾಗಿ ಕಾರ್ಯಕ್ರಮ ಉದ್ಘಾಟನೆಗೆ ಡಾ.ಮಂಜುನಾಥ್ ಅವರಿಗೂ ಆಹ್ವಾನ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಾ.ಮಂಜುನಾಥ್, 'ಕೊರೊನಾ ವಾರಿಯರ್ಸ್‍ಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ವಿಶ್ವವಿಖ್ಯಾತ ದಸರಾ ಉದ್ಘಾಟನೆಗೆ ನನ್ನನ್ನು ಆಹ್ವಾನಿಸಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ ವೈದ್ಯರಿಗೆ ಆಹ್ವಾನ ನೀಡಿದ್ದಾರೆ. ಸರ್ಕಾರದ ಗೌರವಕ್ಕೆ ನಾನು ಆಭಾರಿಯಾಗಿರುತ್ತೇನೆ ಎಂದು ತಿಳಿಸಿದ್ದಾರೆ.
ಕೊರೊನಾ ನಡುವೆ ದಸರಾ ನಡೆಯುತ್ತಿದೆ. ಹೀಗಾಗಿ ಸರ್ಕಾರದ ಜೊತೆಗೆ ಸಾರ್ವಜನಿಕರು ಎಚ್ಚರಿ ವಹಿಸಬೇಕು. ಕೋವಿಡ್-19ಗೆ ಇನ್ನೂ ವ್ಯಾಕ್ಸಿನ್ ಇಲ್ಲ. ವ್ಯಾಕ್ಸಿನ್ ಅಂದರೆ ಅದು ಕೇವಲ ಮಾಸ್ಕ್ ಮಾತ್ರ. ಮಾಸ್ಕ್ ಹಾಕಿಕೊಂಡು, ಸಾಮಾಜಿಕ ಅಂತರ ಕಾಪಾಡಬೇಕು ಎಂದು ತಿಳಿಸಿದರು.
PublicNext
12/10/2020 03:22 pm