ಬೆಂಗಳೂರು:ಈಗಾಗಲೇ ರಾಜ್ಯ ಸೇರಿದಂತೆ ದೇಶದ ರಾಜಕೀಯದಲ್ಲಿ ಸಕ್ರಿಯರಾಗಿದ್ದ ರಾಜಕಾರಣಿಗಳು ಕೊರೊನಾ ಕೈಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸದ್ಯ ಬೈ ಎಲೆಕ್ಷನ್ ಕಾವು ಎಚ್ಚಾಗಿದೆ ಇದರ ಮಧ್ಯೆ ಮತಯಾಚಿಸಲು ಸದಾ ಬ್ಯುಜಿಯಾಗಿರುವ ಅಭ್ಯರ್ಥಿಗಳು ಸದಾ ಮಾಸ್ಕ್, ಗ್ಲೌಸ್ ಧರಿಸುವುದು, ಯಾವಾಗಲೂ ಬಿಸಿನೀರು ಕುಡಿಯುವುದು ಸೇರಿದಂತೆ ಉಪ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ತಮ್ಮ ಮತ್ತು ತಮ್ಮ ಜೊತೆಗಿರುವವರ ಸುರಕ್ಷತೆಗಾಗಿ ಎರಡು ದಿನಕ್ಕೊಮ್ಮೆ ಕೋವಿಡ್ 19 ಪರೀಕ್ಷೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ಇದರ ಮಧ್ಯೆ ಶಿರಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೀಗಾಗಿ ಚುನಾವಣೆಗೆ ಸ್ಪರ್ಧಿಸಿರುವ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ಎರಡು ಮೂರು ದಿನಗಳಿಗೊಮ್ಮೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ, ಏಕೆಂದರೇ ಅಭ್ಯರ್ಥಿಗಳಿಗೆ ಸೋಂಕು ತಗುಲಿದರೇ ಅವರೇ ಸೂಪರ್ ಸ್ಪ್ರೆಡರ್ ಗಳಾಗುತ್ತಾರೆ ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.
ಎರಡು ದಿನಕ್ಕೊಮ್ಮೆ ಕಡ್ಡಾಯವಾಗಿ ಕೊರೋನಾ ಪರೀಕ್ಷೆ ಮಾಡಿಸುವುದು ಆದೇಶವಾಗಿದೆ ಎಂದು ರಾಜ್ಯ ಚುನಾವಣಾ ಆಯೋಗದ ಮುಖ್ಯಸ್ಥ ಸಂಜೀವ್ ಕುಮಾರ್ ಹೇಳಿದ್ದಾರೆ.
ಶೀಘ್ರವೇ ಕರ್ನಾಟಕ ಸರ್ಕಾರ ಅಥವಾ ಕೇಂದ್ರ ಗೃಹ ಇಲಾಖೆ ಮಾರ್ಗಸೂಚಿ ಹೊರಡಿಸಲಿದೆ ಎಂದು ತಿಳಿಸಿದ್ದಾರೆ.
PublicNext
15/10/2020 08:58 am