ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದ್ದು, ಇಂದು ಒಂದೇ ದಿನ 63,371 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 895 ಮಂದಿ ಸಾವನ್ನಪ್ಪಿದ್ದಾರೆ.
ಭಾರತದಲ್ಲಿ ಸದ್ಯ 73,70,469 ಸೋಂಕಿತ ಪ್ರಕರಣಗಳಿವೆ, ಸೋಂಕಿತರ ಪೈಕಿ 8,04,528 ಸಕ್ರಿಯ ಪ್ರಕರಣಗಳಿದ್ದರೆ, 64,53,780 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1,12,161 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಯಲ್ಲಿ 895 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೆ ದೇಶದಲ್ಲಿ 1,12,161 ಮಂದಿ ಕೊರೊನ ದಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಭಾರತ ಇನ್ನು ಕೆಲವೇ ತಿಂಗಳುಗಳ ಅಂತರದಲ್ಲಿ ಕೊರೊನಾ ವ್ಯಾಕ್ಸಿನ್ ಹೊಂದುವ ನಿರೀಕ್ಷೆ ಇದ್ದು, ಮುಂದಿನ ಆರು ತಿಂಗಳಲ್ಲಿ ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಮಾಡಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
PublicNext
16/10/2020 01:19 pm