ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿಂದು 7,184 ಕೊರೊನಾ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿಂದು ಬರೋಬ್ಬರಿ 7,184 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 7,58,574 ಕ್ಕೆ ಏರಿಕೆಯಾಗಿದೆ.

ಮತ್ತೊಂದೆಡೆ ಡೆಡ್ಲಿ ಸೋಂಕಿನಿಂದ ಸುಧಾರಿಸಿಕೊಂಡ 8,893 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಈ ಮೂಲಕ ಇದುವರೆಗೆ ಗುಣವಾಗಿರುವವರ ಸಂಖ್ಯೆ 6,37,481ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ 1,10,647 ಪ್ರಕರಣಗಳು ಸಕ್ರಿಯವಾಗಿದ್ದು, ಅವರಲ್ಲಿ ಗಂಭೀರ ರೋಗಲಕ್ಷಣಗಳಿರುವ 940 ಸೋಂಕಿತರು ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದೊಂದೆ ದಿನ 71 ಮಂದಿ ಕೊರೊನಾಗೆ ಬಲಿಯಾಗಿದ್ದು, ಮೃತಪಟ್ಟವರ ಸಂಖ್ಯೆ ಒಟ್ಟು 10,427ಕ್ಕೆ ತಲುಪಿದೆ.

Edited By : Nirmala Aralikatti
PublicNext

PublicNext

17/10/2020 10:56 pm

Cinque Terre

54.76 K

Cinque Terre

0