ನವದೆಹಲಿ : ದೇಶದಾದ್ಯಂತ ಜಾರಿಯಲ್ಲಿದ್ದ ಲಾಕ್ ಡೌನ್ ಸಡಿಲಗೊಂಡ ಬೆನ್ನಲ್ಲೇ ದೇಶದಲ್ಲಿ ದಿನದಿನದ ದಿನಕ್ಕೆ ಕೊರೊನಾಸುರನ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 61,871 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 74,94,552ಕ್ಕೆ ಏರಿಕೆಯಾಗಿದೆ.
ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 61,871 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, 1033 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,14,031ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 7,83,311 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 65,97,210 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
PublicNext
18/10/2020 10:38 am