ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಚಿವ ಎಸ್ ಸುರೇಶ್ ಕುಮಾರ್ ಕೋವಿಡ್ ವರದಿ ನೆಗೆಟಿವ್ : ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು : ಇತ್ತಿಚ್ಚೆಗೆ ಡೆಡ್ಲಿ ಸೋಂಕು ಕೊರೊನಾ ವೈರಸ್ ಅಟ್ಯಾಕ್ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಗುಣಮುಖರಾಗಿ ನಿನ್ನೆ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸುರೇಶ್ ಕುಮಾರ್, ನಿನ್ನೆ ರಾತ್ರಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆ ಸೇರಿದ್ದೇನೆ. ಸೋಮವಾರ, ಅಕ್ಟೋಬರ್ 5 ರಂದು ನನಗೆ ಕೊರೋನಾ ಸೋಂಕು ತಗುಲಿದೆ ಎಂದು ತಿಳಿದಾಗ ಬಿಬಿಎಂಪಿ ತಂಡದ ಸಲಹೆಯಂತೆ ನಾನು ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿದ್ದೆ.

ವೈದ್ಯರು ಸೂಚಿಸಿದ ಔಷಧಗಳನ್ನು ತೆಗೆದುಕೊಳ್ಳುತ್ತಿದ್ದೆ,‌ ಆದರೆ ಅಕ್ಟೋಬರ್ 10 ರಂದು ನನ್ನ ಮನೆಗೆ ಬಂದ ವೈದ್ಯರೊಬ್ಬರು ನನ್ನ ಉಸಿರಾಟದಲ್ಲಿ ವ್ಯತ್ಯಾಸವನ್ನು ಗಮನಿಸಿ ತಕ್ಷಣ ಪರೀಕ್ಷೆಗೆ ಒಳಗಾಗ ಬೇಕೆಂದು ಆಗ್ರಹಿಸಿದರು.

ಅವರ ಸೂಚನೆ ಮೇರೆಗೆ ನಾನು ಅವರೊಡನೇ ಹೋಗಿ ಶ್ವಾಸಕೋಶದ ಸಿಟಿ ಸ್ಕ್ಯಾನ್ (CT -Scan) ಗೆ ಒಳಗಾದೆ. ಆಗ ನನ್ನ ಶ್ವಾಸಕೋಶಕ್ಕೆ ಸ್ವಲ್ಪ ಹೆಚ್ಚಿನ ಪ್ರಮಾಣದಲ್ಲಿಯೇ ಸೋಂಕು ಹರಡಿದೆ ಎಂದು ತಿಳಿದುಬಂತು.

ಕಳೆದ ಎಂಟು ದಿನಗಳಿಂದ ನನಗೆ ಎಲ್ಲಾ ರೀತಿಯ ಚಿಕಿತ್ಸೆ ನೀಡಿ, ಶುಶ್ರೂಷೆ ಮಾಡಿ ನನ್ನನ್ನು ಗುಣಮುಖನಾಗುವ ಹಾದಿಗೆ ತಂದ ಡಾ. ಶಶಾಂಕ್, ಡಾ. ಶ್ರೀನಾಥ್, ಡಾ. ಪೂರ್ಣ ಪ್ರಸಾದ್, ಡಾ. ಕೃಪೇಶ್ ಮತ್ತು ಎಲ್ಲಾ ದಾದಿಯರಿಗೆ ಕೃತಜ್ಞತೆಗಳನ್ನು ತಿಳಿಸಿದ್ದಾರೆ.

ನನಗೆ ಇನ್ನೂ ಎರಡು ವಾರಗಳ ಕಾಲ ಮನೆಯಿಂದ ಹೋಗಬಾರದು ಎಂಬ ಷರತ್ತಿನ ಮೇಲೆ ನನ್ನನ್ನು ಬಿಡುಗಡೆ ಮಾಡಿದ್ದಾರೆ. ನಾನು ಡಾಕ್ಟರ್ ಮಾತು ಪಾಲಿಸುತ್ತೇನೆ ಎಂದು ಮಾತು ಕೊಟ್ಟು ಮನೆ ಸೇರಿದ್ದೇನೆ.ಮನೆಯಲ್ಲಿ ಕೆಲ ಚಿಕಿತ್ಸೆ‌ ಮುಂದುವರೆಯಲಿದ ಎಂದು ಹೇಳಿದ್ದಾರೆ.

Edited By :
PublicNext

PublicNext

18/10/2020 11:05 am

Cinque Terre

73.31 K

Cinque Terre

0