ಹೊಸದಿಲ್ಲಿ: ಪ್ರಸಕ್ತ ಚಳಿಗಾಲದ ಅವಧಿಯಲ್ಲಿ ಕೊರೊನಾದ 2ನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಕೊರೊನಾ ನಿಯಂತ್ರಣಕ್ಕೆ ಸರಕಾರ ರಚಿಸಿದ್ದ ತಜ್ಞರ ಸಮಿತಿ ಎಚ್ಚರಿಕೆ ನೀಡಿದೆ.
ಹಬ್ಬದ ಸಮಯದಲ್ಲಿ ನಾಗರಿಕರು ಎಚ್ಚರಿಕೆ ಕ್ರಮಗಳನ್ನು ಪಾಲಿಸದೆ ಇದ್ದರೆ ದೇಶದಲ್ಲಿ ಅಪಾಯ ಫಿಕ್ಸ್ ಎಂದು ಎಚ್ಚರಿಕೆ ನೀಡಿದೆ.
ಐಐಟಿ ಹೈದರಾಬಾದ್ ಪ್ರಾಧ್ಯಾಪಕ ಎಂ. ವಿದ್ಯಾಸಾಗರ ನೇತೃತ್ವದ ಸಮಿತಿ ಅಧ್ಯಯನ ನಡೆಸಿ ಈ ಅಭಿಪ್ರಾಯಕ್ಕೆ ಬಂದಿದೆ.
ಮುನ್ನೆಚ್ಚರಿಕೆ ಇಲ್ಲದಿದ್ದರೆ ಹಬ್ಬದ ಋತುವಿನಲ್ಲಿ 26 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣ ದಾಖಲಾಗಬಹುದು ಎಂದಿರುವ ತಜ್ಞರು ಮುನ್ನೆಚ್ಚರಿಕೆ ಕ್ರಮಗಳನ್ನು ಎಲ್ಲರೂ ಪಾಲಿಸಬೇಕು ಎಂದಿದ್ದಾರೆ.
ದೇಶದಲ್ಲಿ ಕೋವಿಡ್ ಸೋಂಕಿನ ಏರಿಕೆಯ ಗರಿಷ್ಠ ಮಿತಿ ಈಗಾಗಲೇ ತಲುಪಿದೆ.
ಸದ್ಯ ಕಡಿಮೆಯಾಗುತ್ತಿದೆ. ನಿಯಂತ್ರಣ ಕ್ರಮಗಳನ್ನು ಸಮರ್ಪಕವಾಗಿ ಕೈಗೊಂಡರೆ ಮುಂದಿನ ವರ್ಷದ ಆರಂಭದಲ್ಲಿ ನಿಯಂತ್ರಿಸಲು ಸಾಧ್ಯ.
ಇಲ್ಲದಿದ್ದರೆ ದೇಶದಲ್ಲಿ ಸೋಂಕಿತರ ಸಂಖ್ಯೆ 1.6 ಕೋಟಿಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಸಮಿತಿ ಎಚ್ಚರಿಸಿದೆ.
PublicNext
19/10/2020 07:43 am