ಬೆಂಗಳೂರು: ಚಳಿಗಾಲದಲ್ಲಿ ಸಾಂಕ್ರಾಮಿಕ ರೋಗ ಹಾಗೂ ಕೋವಿಡ್-19 ಹೆಚ್ಚುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಸಚಿವರು, 'ನವೆಂಬರ್, ಡಿಸೆಂಬರ್ ತಿಂಗಳಿನಲ್ಲಿ ಅತಿಯಾದ ಚಳಿ ಇರುವ ಕಾರಣ ಸೋಂಕು ಹೆಚ್ಚಾಗುವ ಕುರಿತು ಮುನ್ನಚ್ಚೆರಿಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೇವಲ ಕೋವಿಡ್ ಮಾತ್ರವಲ್ಲದೇ ಇತರೇ ಸಾಂಕ್ರಾಮಿಕ ರೋಗಗಳು ಉಲ್ಬಣ ಆಗದಂತೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಈಗಾಗಲೇ ಚರ್ಚೆ ಮಾಡಿ ಸೂಚನೆ ನೀಡಲಾಗಿದೆ' ಎಂದು ಹೇಳಿದರು.
ಕೇರಳದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿತ್ತು. ಆದರೆ ಓಣಂ ಆಚರಣೆ ನಂತರ ನಿಯಂತ್ರಣ ತಪ್ಪಿದ್ದು, ಸೋಂಕಿತರ ಸಂಖ್ಯೆ ಭಾರೀ ಏರಿಕೆಯಾಗುತ್ತಿದೆ. ಆದ್ದರಿಂದ ನಾಡಹಬ್ಬ ದಸರಾದ ವಿಚಾರದಲ್ಲಿ ನಾವು ಎಚ್ಚರಿಕೆ ವಹಿಸಬೇಕು. ಆದಷ್ಟು ಸರಳವಾಗಿ ನಾಡಹಬ್ಬ ದಸರಾ ಆಚರಿಸಬೇಕಿದೆ ಎಂದು ಸಲಹೆ ನೀಡಿದರು.
PublicNext
19/10/2020 11:32 pm