ಮಹಾರಾಷ್ಟ್ರ : ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ಕಳೆದ ಲಾಕ್ ಡೌನ್ ಶುರುವಾಗಿನಿಂದಲೂ ನಿರಂತರವಾಗಿ ಜನರ ಸೇವೆಗಾಗಿ ದುಡಿಯುತ್ತಿದ್ದೆ.
ಇಂತಹ ನನಗೆ ದೇವರು ವಿಶ್ರಾಂತಿ ತಗೊಳ್ಳಿ ಎಂಬುದಾಗಿ ಸೂಚಿಸಿದ್ದಾನೆ.
ಕೊರೊನಾ ಪರೀಕ್ಷೆಗೆ ಒಳಗಾದ ನನ್ನ ಕೋವಿಡ್-19 ವರದಿ ಬಂದಿದ್ದು, ನನಗೂ ಕೊರೊನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಹೀಗಾಗಿ ವೈದ್ಯರ ಸಲಹೆಯ ಮೇರೆಗೆ ಹೋಂ ಐಸೋಲೇಷನ್ ಆಗಿದ್ದು, ಚಿಕಿತ್ಸೆ ಪಡೆಯಲಿರುವುದಾಗಿ ತಿಳಿಸಿದ್ದಾರೆ.
PublicNext
24/10/2020 02:51 pm