ಬೆಂಗಳೂರು: ಕೊರೊನಾ ದಿನದಿಂದ ದಿನಕ್ಕೆ ತನ್ನ ಕಂಟ್ರೋಲ್ ಕಳೆದುಕೊಳ್ಳುತ್ತಿದೆ ಎನ್ನುವುದಕ್ಕೆ ಸೋಂಕಿನಿಂದ ಸುಧಾರಿಸಿಕೊಳ್ಳುವವರ ಸಂಖ್ಯೆ ಹೆಚ್ಚಾಳವಾಗುತ್ತಿರೋದೆ ಕಾರಣ.
ಇದು ರಾಜ್ಯದ ಜನತೆಯಲ್ಲಿಯೂ ಒಂದು ನೆಮ್ಮದಿಯನ್ನು ತಂದಿದೆ.
ಇಂದು 7,153 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 7,00,737ಕ್ಕೆ ಏರಿಕೆಯಾಗಿದೆ.
ಇಂದು 4,471 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,98,378ಕ್ಕೆ ಏರಿಕೆಯಾಗಿದೆ.
ಇನ್ನೂ ಡೆಡ್ಲಿ ಸೋಂಕಿನಿಂದ 24 ಗಂಟೆಯಲ್ಲಿ ರಾಜ್ಯದಲ್ಲಿ 52 ಮಂದಿ ಬಲಿಯಾಗಿದ್ದಾರೆ.
ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10,873ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರಲ್ಲಿ ಅತಿ ಹೆಚ್ಚು ಅಂದರೆ 2,251 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,23,305ಕ್ಕೆ ಏರಿಕೆಯಾಗಿದೆ.
ಇಂದು 26 ಮಂದಿ ಮೃತಪಟ್ಟಿದ್ದಾರೆ.
86,749 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 935 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ.
PublicNext
24/10/2020 09:04 pm