ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆರ್‌ಬಿಐ ಗವರ್ನರ್‌ ಶಕ್ತಿಕಾಂತ್ ದಾಸ್‌ಗೆ ಕೊರೊನಾ ದೃಢ

ಮುಂಬೈ: ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಗವರ್ನರ್‌ ಶಕ್ತಿಕಾಂತ್ ದಾಸ್‌ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಶಕ್ತಕಾಂತ್ ದಾಸ್‌ ಅವರು, ನನಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಯಾವುದೇ ಆತಂಕಪಡುವ ಅಗತ್ಯವಿಲ್ಲ. ನಾನು ಆರೋಗ್ಯವಾಗಿದ್ದೇನೆ. ಆದರೆ ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಎಚ್ಚರವಹಿಸಿ. ಐಸೋಲೇಷನ್‌ನಿಂದ ಕೆಲಸವನ್ನು ಮುಂದುವರಿಸುತ್ತೇವೆ. ಆರ್‌ಬಿಐನಲ್ಲಿ ಕೆಲಸ ಸಾಮಾನ್ಯವಾಗಿ ನಡೆಯುತ್ತದೆ. ವಿಡಿಯೋ ಕಾಲ್ ಹಾಗೂ ಫೋನ್ ಮೂಲಕ ನಾನು ಎಲ್ಲಾ ಡೆಪ್ಯುಟಿ ಗವರ್ನರ್‌ ಗಳು ಹಾಗೂ ಅಧಿಕಾರಿಗಳ ಜೊತೆಗೆ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

25/10/2020 07:02 pm

Cinque Terre

46.25 K

Cinque Terre

0