ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅನ್ ಲಾಕ್-5 ನವೆಂಬರ್ ಅಂತ್ಯದವರೆಗೆ ವಿಸ್ತರಣೆ

ಬೆಂಗಳೂರು: ಅನ್ ಲಾಕ್-5 ನವೆಂಬರ್ ಕೊನೆಯವರೆಗೆ ವಿಸ್ತರಿಸಲಾಗಿದ್ದು, ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಈಗ ಜಾರಿಯಲ್ಲಿರುವ ಅನ್’ಲಾಕ್ 5 ಅನ್ನು ನವೆಂಬರ್ 30ರ ವರೆಗೆ ವಿಸ್ತರಿಸಲಾಗಿದ್ದು, ಯಾವುದೇ ಹೊಸ ಮಾರ್ಗಸೂಚಿಯನ್ನು ಹೊರಡಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಹೊಸ ಆದೇಶದಲ್ಲಿ ತಿಳಿಸಿದೆ.

ದೇಶಾದ್ಯಂತ ಕಂಟೈನ್ಮೆಂಟ್ ಝೋನ್ ಗಳಲ್ಲಿ ಲಾಕ್ ಡೌನ್ ನವೆಂಬರ್ 30ರ ತನಕ ಮುಂದುವರೆಯಲಿದೆ. ಉಳಿದ ಪ್ರದೇಶಗಳಲ್ಲಿ ಅನ್ ಲಾಕ್ 5.0 ಮಾರ್ಗಸೂಚಿಯಲ್ಲಿ ಪ್ರಕಟಿಸಿದ ನಿಯಮಗಳು ಜಾರಿಯಲ್ಲಿರುತ್ತವೆ.

ಅನ್ ಲಾಕ್ 5 ಮಾರ್ಗಸೂಚಿಯಲ್ಲಿ ಚಿತ್ರ ಮಂದಿರ, ಈಜುಕೊಳ, ಕ್ರೀಡಾ ತರಬೇತಿ, ಮನೋರಂಜನಾ ಪಾರ್ಕ್ಗಳನ್ನು ತೆರೆಯಲು ಅನುಮತಿ ನೀಡಲಾಗಿತ್ತು.

ಚಿತ್ರಮಂದಿರಲ್ಲಿ ಶೇ 50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಬೇಕು ಎಂದು ತಿಳಿಸಲಾಗಿತ್ತು. ಇದೇ ನಿಯಮ ನವೆಂಬರ್ 30ರ ತನಕ ಮುಂದುವರೆಯಲಿದೆ.

Edited By : Nirmala Aralikatti
PublicNext

PublicNext

28/10/2020 10:22 am

Cinque Terre

69.27 K

Cinque Terre

0