ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಂಗಳೂರು: ಕೊರೊನಾಗೆ ಕೋವಿಡ್ ವಾರಿಯರ್ ಮೊದಲ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಡಿ ದರ್ಜೆ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದ ಮಹಿಳೆಯೊಬ್ಬರು ಹೆಮ್ಮಾರಿ ಕೋವಿಡ್-19 ಸೋಂಕಿಗೆ ಬಲಿಯಾಗಿದ್ದಾರೆ.

53 ವರ್ಷದ ಧನಲಕ್ಷ್ಮಿ ಮೃತ ಕೋವಿಡ್-19 ವಾರಿಯರ್. ಧನಲಕ್ಷ್ಮಿ ಅವರು ಕಳೆದ 15 ವರ್ಷಗಳಿಂದ ಎನ್.ಆರ್.ಪುರದ ಸರ್ಕಾರಿ ಆಸ್ಪತ್ರೆಯ ಹೆರಿಗೆ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಆರೇಳು ತಿಂಗಳಿಂದ ಕೊರೊನಾ ವಾರಿಯರ್ ಆಗಿ ಕೆಲಸ ಮಾಡುತ್ತಿದ್ದ ಧನಲಕ್ಷ್ಮಿ ಅವರು ಸೋಂಕಿಗೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಕೊರೊನಾಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ.

ಆರೋಗ್ಯ ತೀವ್ರ ಹದಗೆಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಕೊರೊನಾ ಪರೀಕ್ಷೆ ನಡೆಸಿದಾಗ ಪಾಸಿಟಿವ್ ದೃಢಪಟ್ಟು ಚಿಕಿತ್ಸೆ ಮುಂದುವರಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಮಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದ ಧನಲಕ್ಷ್ಮಿ ಅವರು ನಿನ್ನೆ ಬೆಳಗ್ಗೆ ಸಾವನ್ನಪ್ಪಿದ್ದಾರೆ.

Edited By : Vijay Kumar
PublicNext

PublicNext

31/10/2020 11:02 am

Cinque Terre

40.55 K

Cinque Terre

1