ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹರಡುವಿಕೆ ಕಡಿಮೆಯಾಗುತ್ತಿದೆ.
ಇಂದು 3,014 ಮಂದಿಗೆ ಸೋಂಕು ದೃಢವಾಗಿದ್ದು ಸೋಂಕಿತರ ಸಂಖ್ಯೆ 8,23,412ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 7,468 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 7,57,208ಕ್ಕೆ ಏರಿಕೆಯಾಗಿದೆ.
ಸತತ 17ನೇ ದಿನವೂ ಸೋಂಕು ಪ್ರಕರಣಕ್ಕಿಂತ ಚೇತರಿಕೆ ಪ್ರಮಾಣ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ.
PublicNext
31/10/2020 06:37 pm