ಪ್ರಯಾಗ್'ರಾಜ್ : ಬೆಳಕಿನ ಹಬ್ಬದಂದೆ ಬಾಳಿ ಬದುಕಬೇಕಾದ ಮಗುವಿನ ಬದುಕು ಕತ್ತಲಾಗಿದೆ.
ಹ್ಬಬದ ಸಂಭ್ರಮದಲ್ಲಿ ಪಟಾಕಿ ಸಿಡಿಸಲು ಹೋಗಿ ಗಂಭೀರವಾಗಿ ಗಾಯಗೊಂಡಿದ್ದ ಬಿಜೆಪಿ ಸಂಸದೆ ರೀತಾ ಬಹುಗುಣ ಅವರ 8 ವರ್ಷದ ಮೊಮ್ಮಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.
8 ವರ್ಷದ ಮಗು ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ಹೊಡೆಯಲು ಆರಂಭಿಸಿದ್ದಳು.
ಈ ವೇಳೆ ಮಗು ಶೇ.60ರಷ್ಟು ಸುಟ್ಟುಗಂಭೀರವಾಗಿ ಗಾಯಗೊಂಡಿದೆ. ಕೂಡಲೇ ಬಾಲಕಿಯನ್ನು ಏರ್ ಆ್ಯಂಬುಲೆನ್ಸ್ ಮೂಲಕ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕೂಡಲ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ.
ಬಾಲಕಿಯ ಸಾವು ಹಿನ್ನೆಲೆಯಲ್ಲಿ ಇದೀಗ ಸಂಸದೆ ರೀತಾ ಬಹುಗುಣ ಅವರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
PublicNext
17/11/2020 10:58 am