ಬೆಂಗಳೂರು: ಇತ್ತೀಚಿಗಷ್ಟೇ ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್ ಗಸ್ತಿ(55) ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ತೀವ್ರ ಜ್ವರದಿಂದ ಬಳಲುತ್ತಿದ್ದ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಶೋಕ್ ಗಸ್ತಿ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ, ಸೆಪ್ಟೆಂಬರ್ 2ರಂದು ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿತ್ತು. ಅಸ್ಪತ್ರೆಯಲ್ಲಿ ಕಳೆದ 15 ದಿನಗಳಿಂದ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ.
ಮೂಲತಃ ಬಳ್ಳಾರಿ ಜಿಲ್ಲೆಯವರಾದ ಅಶೋಕ್ ಗಸ್ತಿ ಅವರು ಆರ್ ಎಸ್ಎಸ್‍ನ ಶಿಸ್ತಿನ ಸಿಪಾಯಿ ಆಗಿದ್ದರು ನಾಲ್ಕು ತಿಂಗಳ ಹಿಂದಷ್ಟೇ ರಾಜ್ಯಸಭೆಗೆ ಆಯ್ಕೆ ಮಾಡಲಾಗಿತ್ತು. ಜುಲೈ 22 ರಂದು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.
ಅಶೋಕ್ ಗಸ್ತಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, "ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರು ಪಕ್ಷ ಸಂಘಟನೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಬಡವರ, ದೀನ-ದಲಿತರ ಸಬಲೀಕರಣಕ್ಕಾಗಿ ದುಡಿಯುತ್ತಿದ್ದರು. ಅವರ ನಿಧನದಿಂದಾಗಿ ನೋವುಂಟಾಗಿದೆ" ಎಂದು ಸಂತಾಪ ಸೂಚಿಸಿದ್ದಾರೆ.
PublicNext
18/09/2020 07:42 am