ಬೆಂಗಳೂರು : ಎರಡು ಬಾರಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾಜಿ ಸದ್ಯರಾಗಿದ್ದ ಎಂ.ನಾಗರಾಜ್ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಎಂ.ನಾಗರಾಜ್ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ರಾಜ್ಯಸಭಾ ಸದಸ್ಯ, ಬಿಜೆಪಿ ನಾಯಕ ಅಶೋಕ ಗಸ್ತಿ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಅವರಿಗೂ ಸಹ ಕೋವಿಡ್ ಸೋಂಕು ತಗುಲಿತ್ತು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ.
PublicNext
18/09/2020 12:09 pm