ಕಾರವಾರ: ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಶಾಸಕಿ ರೂಪಾಲಿ ನಾಯ್ಕ್ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಆದ್ರೆ ಅವರಿಗೆ ಚಿಕಿತ್ಸೆ ಮಾತ್ರ ಸಿಗಲಿಲ್ಲ.
ಹೌದು! ಇಂತಹ ಘಟನೆ ಕಾರವಾರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಿಣಗಾದ ಬಳಿ ಬೈಕ್ ಹಾಗೂ ಮೀನು ತುಂಬಿದ ಲಾರಿ ಡಿಕ್ಕಿಯಾದ ಪರಿಣಾಮ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದರು. ಅದೇ ಮಾರ್ಗವಾಗಿ ತೆರಳುತ್ತಿದ್ದ ಶಾಸಕಿ ರೂಪಾಲಿ ನಾಯ್ಕ್ 108ಕ್ಕೆ ಕರೆ ಮಾಡಿದ್ದಾರೆ. ಆದ್ರೆ ಸುಮಾರು ಹೊತ್ತು ಕಾಯ್ದರೂ ಆ್ಯಂಬುಲೆನ್ಸ್ ಬಂದಿಲ್ಲ.
ಹೀಗಾಗಿ ಖಾಸಗೀ ಆ್ಯಂಬುಲೆನ್ಸ್ ಮೂಲಕ ಕಾರವಾರದ ಜಿಲ್ಲಾಸ್ಪತ್ರೆಗೆ ಕರೆತಂದಿದ್ದಾರೆ. ಆದ್ರೆ ಈ ವೇಳೆ ಚಿಕಿತ್ಸೆ ನೀಡಬೇಕಾದ ಯಾವೊಬ್ಬ ವೈದ್ಯರೂ ಆಸ್ಪತ್ರೆಯಲ್ಲಿರಲಿಲ್ಲ. ಆಕ್ರೋಶಿತರಾದ ಶಾಸಕಿ ರೂಪಾಲಿ ನಾಯ್ಕ್ ಅವರು ಸ್ಥಳಕ್ಕೆ ಆರ್ ಎಂ ಓ ವೆಂಕಟೇಶ್ ಅವರನ್ನು ಸ್ಥಳಕ್ಕೆ ಕರೆಸಿಕೊಂಡು ತರಾಟೆಗೆ ತೆಗೆದುಕೊಂಡರು.
ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿರುವುದರಿಂದ ಕರಾವಳಿ ಭಾಗದಲ್ಲಿ ಅಪಘಾತಗಳು ಸರ್ವೇ ಸಾಮಾನ್ಯವಾಗಿದೆ. ಸೂಕ್ತ ಸಮಯದಲ್ಲಿ ಸರ್ಕಾರಿ ಆ್ಯಂಬುಲೆನ್ಸ್ ಬರೋದೇ ಇಲ್ಲ. ಹೀಗಾಗಿ ಅಪಘಾತಕ್ಕೊಳಗಾದ ಬಹುತೇಕರು ಮಾರ್ಗ ಮಧ್ಯದಲ್ಲೇ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಉತ್ತರ ಕನ್ನಡಿಗರು ಆರೋಪಿಸಿದ್ದಾರೆ.
PublicNext
25/01/2021 07:32 pm