ವಿಜಯ ನಗರ : ಜಿಲ್ಲೆಯ ಹೂವಿನಹಡಗಲಿಯ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಗ್ರಾಮಸ್ಥರು ಅಸ್ವಸ್ಥಗೊಂಡ ಪ್ರಕರಣದ ಸಾವಿನ ಸಂಖ್ಯೆ ಆರಕ್ಕೆ ಏರಿದೆ. ವಾಂತಿ ಬೇಧಿಯಿಂದ ಬಳಲುತ್ತಿದ್ದ ಕೆಂಚಮ್ಮ(65) ಅವರನ್ನು ಹೂವಿನಹಡಗಲಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದುವರೆಗೆ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 6 ಕ್ಕೆ ಏರಿಕೆಯಾಗಿದ್ದು ಆತಂಕ ಮೂಡಿಸಿದೆ.
ಬೋರ್ ವೆಲ್ ನಿಂದ ಹೊಸ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು ಈ ವೇಳೆ, ಹಳೆ ಪೈಪ್ ಗಳಿಗೆ ಡ್ಯಾಮೇಜ್ ಆಗಿದೆ. ಡ್ಯಾಮೇಜ್ ಆದ ಪೈಪ್ ನೊಳಗೆ ಚರಂಡಿ ನೀರು ಮಿಶ್ರವಾಗಿದ್ದು, ಇದೇ ನೀರನ್ನು ಮಕರಬ್ಬಿ ಗ್ರಾಮಸ್ಥರು ಸೇವಿಸಿದ್ದಾರೆ. ಸುಮಾರು 2 ಸಾವಿರಕ್ಕೂ ಅಧಿಕ ಜನಸಂಖ್ಯೆ ಇರೋ ಮಕರಬ್ಬಿ ಗ್ರಾಮದಲ್ಲಿ ಈ ಕಾರಣದಿಂದ ಸುಮಾರು 200 ಕ್ಕೂ ಜನರು ವಾಂತಿಬೇಧಿಯಿಂದ ಬಳಲಿದ್ದರು.
PublicNext
04/10/2021 01:55 pm