ನವದೆಹಲಿ : ಡೆಡ್ಲಿ ಸೋಂಕು ಕೋವಿಡ್-19 ಸೋಂಕಿಗೆ ತುತ್ತಾಗಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಗುಣಮುಖರಾಗಿದ್ದು, ಶೀಘ್ರ ಕರ್ತವ್ಯಕ್ಕೆ ಮರಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಸಚಿವೆ ತಮ್ಮ ಕೋವಿಡ್ ಪರೀಕ್ಷೆ ನೆಗೆಟಿವ್ ಬಂದಿದ್ದು, ನನ್ನ ಚೇತರಿಕೆಗೆ ಹಾರೈಸಿದ ಎಲ್ಲರಿಗೂ ಧನ್ಯವಾದ ತಿಳಿಸುವುದಾಗಿ ಹೇಳಿದ್ದಾರೆ. ಅಲ್ಲದೆ ಶೀಘ್ರವೇ ಕರ್ತವ್ಯಕ್ಕೆ ಮರಳುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕಳೆದ ಅಕ್ಟೋಬರ್ 28ರಂದು ಸ್ಮೃತಿ ಇರಾನಿ ಕೋವಿಡ್ ಪರೀಕ್ಷೆಗೊಳಪಟ್ಟಿದ್ದರು.
ಅಂದು ಅವರ ವರದಿ ಪಾಸಿಟಿವ್ ಬಂದಿತ್ತು. ಇದೀಗ ಚಿಕಿತ್ಸೆ ಬಳಿಕ ಅವರು ಚೇತರಿಸಿಕೊಂಡಿದ್ದಾರೆ.
PublicNext
12/11/2020 01:48 pm