ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ತಗ್ಗುತ್ತಿದೆ. ಇಂದು 1,791 ಹೊಸ ಕೊರೊನಾ ಕೇಸ್ ಗಳು ದಾಖಲಾಗಿವೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,65,931ಕ್ಕೆ ಏರಿಕೆಯಾಗಿದೆ.
ಇನ್ನು ಡೆಡ್ಲಿ ಸೋಂಕಿನಿಂದ ಇಂದು 21 ಮಂದಿ ಸಾವನ್ನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 11,578 ಕ್ಕೆ ಏರಿಕೆಯಾಗಿದೆ.
ಸಮಾಧಾನದ ಸುದ್ದಿ ಅಂದ್ರೆ ಇಂದು 1,947 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಇದುವರೆಗೆ ಗುಣಮುಖರಾದವರ ಸಂಖ್ಯೆ 8,29,188 ಕ್ಕೆ ಏರಿಕೆಯಾಗಿದೆ.
ಇನ್ನು 25,146 ಸಕ್ರೀಯ ಪ್ರಕರಣಗಳಿದ್ದು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು 933 ಮಂದಿಗೆ ಸೋಂಕು ದೃಢಪಟ್ಟಿದ್ದು, ದರೊಂದಿಗೆ ಸೋಂಕಿತರ ಸಂಖ್ಯೆ 3,59,539ಕ್ಕೆ ಏರಿಕೆಯಾಗಿದೆ.
ಸೋಂಕಿಗೆ 10 ಮಂದಿ ಬಲಿಯಾಗುವ ಮೂಲಕ ಸಾವಿನ ಸಂಖ್ಯೆ 4,028ಕ್ಕೆ ಏರಿಕೆಯಾಗಿದೆ.
PublicNext
18/11/2020 07:55 pm