ಚಂಡೀಘರ್: ಕೊರೊನಾ ಹಾವಳಿಯ ಮಧ್ಯೆಯೂ ಶಾಲಾ-ಕಾಲೇಜುಗಳ ಪುನಾರಂಭಕ್ಕೆ ಕೇಂದ್ರ ಸರ್ಕಾರವು ಅಸ್ತು ಎಂದಿದೆ.
ಆದರೆ ಹರಿಯಾಣದಲ್ಲಿ ಶಾಲೆ ತೆರೆದ ಕೆಲವೇ ದಿನಗಳಲ್ಲಿ 12 ಸರ್ಕಾರಿ ಶಾಲೆಗಳ 72 ವಿದ್ಯಾರ್ಥಿಗಳಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಹರಿಯಾಣದ ರೇವಾರಿ ಪ್ರದೇಶದಲ್ಲಿರುವ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಶಾಲೆಗೆ ತೆರಳಿದ ಎರಡ್ಮೂರು ದಿನಗಳಲ್ಲೇ ವಿದ್ಯಾರ್ಥಿಗಳಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ.
ಈ ಹಿನ್ನೆಲೆ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಸಂದರ್ಭದಲ್ಲಿ 72 ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ಖಾತ್ರಿಯಾಗಿದೆ.
PublicNext
18/11/2020 11:07 pm