ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್‌ಗೆ ಶೀಘ್ರದಲ್ಲೇ ಲಸಿಕೆ ಅಭ್ಯವಾಗುವ ವಿಶ್ವಾಸ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಬೆಂಗಳೂರಿಗೆ ಬರುವ ಕೋವಿಡ್ ಲಸಿಕೆ ಸಂಗ್ರಹಿಸಲು ಸಿದ್ಧತೆ ನಡೆಸಲಾಗುತ್ತದೆ.
ಬಿಬಿಎಂಪಿಯು ನಗರದ ಟೌನ್ಹಾಲ್ ಬಳಿಯ ದಾಸಪ್ಪ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಕ್ಕೆ ಸಿದ್ಧತೆ ನಡೆಸಿದೆ. ಅಂಗವಾಗಿ, ಕೋಲ್ಡ್ ಸ್ಟೋರೇಜ್ ಸೌಲಭ್ಯ ಕಲ್ಪಿಸುತ್ತಿದೆ. ಜೊತೆಗೆ ಆಸ್ಪತ್ರೆಯ ಸುತ್ತಲೂ ಹದ್ದಿನ ಕಣ್ಣು ಇಡಲಾಗಿದೆ. ದಾಸಪ್ಪ ಆಸ್ಪತ್ರೆ ಸುತ್ತಮುತ್ತ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ.
ಕೊರೊನಾ ಲಸಿಕೆಯನ್ನ ಸಾಗಿಸಲು ಬಿಬಿಎಂಪಿ ಅಧಿಕಾರಿಗಳು ವ್ಯಾಕ್ಸಿನ್ ವ್ಯಾನ್ ವ್ಯವಸ್ಥೆ ಮಾಡಿದ್ದಾರೆ. ಟೌನ್‌ಹಾಲ್‌ನ ದಾಸಪ್ಪ ಆಸ್ಪತ್ರೆಯಲ್ಲಿರುವ ಕೊರೊನಾ ಲಸಿಕೆ ಸ್ಟೋರೇಜ್ ಕೇಂದ್ರಕ್ಕೆ ಬಿಬಿಎಂಪಿ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
19/11/2020 01:46 pm