ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿಂದು 1,849 ಪಾಸಿಟಿವ್‌, 26 ಬಲಿ – 1,800 ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿಇಂದು 1,849 ಮಂದಿಗೆ ಸೋಂಕು ತಗುಲಿದೆ. ಆಸ್ಪ್ರತ್ರೆಯಿಂದ 1,800 ಮಂದಿ ಬಿಡುಗಡೆಯಾಗಿದ್ದಾರೆ. ಇಂದು ಕೊರೊನಾ ಸೋಂಕಿಗೆ ಒಟ್ಟು 26 ಮಂದಿ ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 8,67,780ಕ್ಕೆ ಏರಿಕೆಯಾಗಿದೆ. ಈ ಪೈಕಿ 8,30,988 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ 25,169 ಸಕ್ರಿಯ ಪ್ರಕರಣಗಳಿವೆ.ಇಲ್ಲಿಯವರೆಗೆ ಒಟ್ಟು 11,604 ಮಂದಿ ಸೋಂಕಿಗೆ ಮೃತಪಟ್ಟಿದ್ದು, 598 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಒಟ್ಟು 25,101 ಆಂಟಿಜನ್‌ ಟೆಸ್ಟ್‌, 93,373 ಆರ್‌ಟಿ ಪಿಸಿಆರ್‌ ಇತ್ಯಾದಿ ಪರೀಕ್ಷೆ ಮಾಡಿದ್ದು ಒಟ್ಟು 1,18,474 ಕೊರೊನಾ ಪರೀಕ್ಷೆಗಳನ್ನು ಮಾಡಲಾಗಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 98,59,525 ಕೊರೊನಾ ಪರೀಕ್ಷೆಗಳನ್ನು ಮಾಡಲಾಗಿದೆ.

Edited By : Nagaraj Tulugeri
PublicNext

PublicNext

19/11/2020 08:45 pm

Cinque Terre

74.28 K

Cinque Terre

0