ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿಂದು 1,781 ಮಂದಿಗೆ ಸೋಂಕು,17 ಮಂದಿ ಮೃತ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದಯವರೆದಿದೆ. ಇಂದು 1,781 ಮಂದಿಗೆ ಸೋಂಕು ತಗುಲಿದೆ. 2,181 ಜನ ಆಸ್ಪ್ರತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಒಟ್ಟು 17 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 8,69,561ಕ್ಕೆ ಏರಿಕೆಯಾಗಿದೆ. ಈ ಪೈಕಿ 8,33,169 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 24,752 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ ಒಟ್ಟು 11,621 ಮಂದಿ ಸೋಂಕಿಗೆ ಮೃತಪಟ್ಟಿದ್ದು, 539 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 99,81,137 ಕೊರೊನಾ ಪರೀಕ್ಷೆಗಳನ್ನು ಮಾಡಲಾಗಿದೆ.

Edited By : Nagaraj Tulugeri
PublicNext

PublicNext

20/11/2020 07:58 pm

Cinque Terre

137.08 K

Cinque Terre

1