ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋವಿಡ್-19 ನಿಯಂತ್ರಣಕ್ಕಾಗಿ ಸರ್ಕಾರದ ನೂತನ ಮಾರ್ಗಸೂಚಿ

ಬೆಂಗಳೂರು: ಕೋವಿಡ್-19 ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯದ ಸೂಚನೆಯಂತೆ ರಾಜ್ಯದಲ್ಲಿ ಮಾರ್ಗಸೂಚಿ ಹೊರಡಿಸಲಾಗಿದೆ. ಇದು ವರ್ಷಾಂತ್ಯದವರೆಗೆ ಜಾರಿಯಲ್ಲಿರುತ್ತದೆ.

ರಾಜ್ಯದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಆದೇಶ ಜಾರಿ ಮಾಡಿದ್ದಾರೆ.

ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆರ್ಥಿಕ ಚಟುವಟಿಕೆಯನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ವ್ಯಾಪಾರ ಚಟುವಟಿಕೆಗಳಿಗೆ ಮಾತ್ರ ವಸ್ತು ಪ್ರದರ್ಶನ ಮಳಿಗೆಗಳನ್ನು ನೀಡಬೇಕು. ಒಳಾಂಗಣ ಸ್ಥಳಗಳಲ್ಲಿ 200 ಜನರ ಪರಿಮಿತಿಗೆ ಒಳಪಟ್ಟು ಸಭಾಭವನದ ಸಾಮರ್ಥ್ಯವನ್ನು ಶೇಕಡ 50ಕ್ಕೆ ಮಾತ್ರ ನಿಯಂತ್ರಿಸಬೇಕು, ಇದೇ ಮಾನದಂಡದ ಅಡಿ ಧಾರ್ಮಿಕ, ಕ್ರೀಡಾ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಮತಿ ನೀಡಬಹುದು.

ಸೋಂಕು ಪಾಸಿಟಿವಿಟಿ ದರ ಶೇಕಡ 10ಕ್ಕಿಂತ ಹೆಚ್ಚಿರುವ ಪ್ರದೇಶಗಳ ಕಚೇರಿಗಳಲ್ಲಿ ಏಕಕಾಲಕ್ಕೆ ಹಾಜರಾಗುವ ಸಿಬ್ಬಂದಿಯ ಸಂಖ್ಯೆಯನ್ನು ಕಡಿತಗೊಳಿಸಲು ಅಥವಾ ಪಾಳಿಯ ಆಧಾರದಲ್ಲಿ ಕಚೇರಿ ಸಮಯವನ್ನು ನಿಗದಿಪಡಿಸಿ, ಸೋಂಕು ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು, ಶೇಕಡ 50 ಅಥವಾ ಅದಕ್ಕಿಂತ ಹೆಚ್ಚು ನೌಕರರನ್ನು ಹೊಂದಿರುವ ಸಂಸ್ಥೆ ಹಾಗೂ ಕಚೇರಿಗಳಲ್ಲಿ ಆರೋಗ್ಯ ಸೇತು ಆ್ಯಪ್ ಬಳಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು, ಸೋಂಕು ನಿಯಂತ್ರಣಕ್ಕಾಗಿ ವಿಪತ್ತು ನಿರ್ವಹಣಾ ಅಧಿನಿಯಮ 2005ರ ಅಡಿ ಹೊರಡಿಸಲಾದ ಮಾರ್ಗಸೂಚಿಗಳನ್ನು ಜಿಲ್ಲಾಡಳಿತಗಳು ದುರ್ಬಲಗೊಳಿಸುವಂತಿಲ್ಲ ಎಂದು ಹೇಳಿದೆ.

ಕೆಲಸದ ಸ್ಥಳಗಳಲ್ಲಿ ಸೋಂಕು ನಿಯಂತ್ರಣಕ್ಕೆ ಹೆಚ್ಚು ಒತ್ತು ನೀಡಬೇಕು, ಮನೆಯಿಂದ ಕೆಲಸ ಮಾಡುವ ಪದ್ಧತಿಗೆ ಹೆಚ್ಚಿನ ಪ್ರೋತ್ಸಾಹ, ಸೋಂಕು ಪತ್ತೆ ಪರೀಕ್ಷೆ ಜೊತೆಗೆ ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕು, ನಿಯಮಿತವಾಗಿ ಸೋಂಕು ನಿವಾರಣೆ ಸಿಂಪಡಿಸಿ, ವ್ಯಕ್ತಿಗತ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

Edited By : Nagaraj Tulugeri
PublicNext

PublicNext

28/11/2020 03:18 pm

Cinque Terre

34.89 K

Cinque Terre

0