ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶನಿವಾರ 4,998 ಹೊಸ ಪ್ರಕರಣಗಳು ದಾಖಲಾಗಿದ್ದು, 89 ಮಂದಿ ಸಾವಿಗೀಡಾಗಿದ್ದಾರೆ. 36,578 ಸಕ್ರಿಯ ಪ್ರಕರಣಗಳಿವೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 41,322 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಇದರೊಂದಿಗೆ ದೇಶದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ ಶನಿವಾರ 93,51,110 ಕ್ಕೆ ಏರಿಕೆಯಾಗಿದೆ.
ಪಶ್ಚಿಮ ಬಂಗಾಳದಲ್ಲಿ ಶನಿವಾರ 3,459 ಹೊಸ ಪ್ರಕರಣಗಳು ದಾಖಲಾಗಿದ್ದು, 52 ಮಂದಿ ಮೃತಪಟ್ಟಿದ್ದಾರೆ. ಈ ವರೆಗೂ ಒಟ್ಟು 4,77,446 ಪ್ರಕರಣಗಳು ಬೆಳಕಿಗೆ ಬಂದಿದ್ದು, ಅದರಲ್ಲಿ 4,44,587 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇತ್ತ ಮಧ್ಯಪ್ರದೇಶದಲ್ಲಿ ಇಂದು 1,634 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 13 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು 14,981 ಸಕ್ರಿಯ ಪ್ರಕರಣಗಳಿವೆ.
PublicNext
28/11/2020 10:33 pm