ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

BPL ಕುಟುಂಬಗಳಿಗೆ ಕೊರೊನಾ ಲಸಿಕೆ ಫ್ರೀ: ಡಾ. ಸುಧಾಕರ್

ಬೆಂಗಳೂರು: ವಿಶ್ವಕ್ಕೆ ಕಂಟಕವಾದ ಡೆಡ್ಲಿ ಸೋಂಕು ಹುಟ್ಟಡಗಿಸಲು ವೈದ್ಯಕೀಯ ಕ್ಷೇತ್ರದಲ್ಲಿ ಮದ್ದು ಅರೆಯುವ ಕಾರ್ಯ ಪ್ರಗತಿಯಲ್ಲಿದೆ.

ಸದ್ಯ ಕೊರೊನಾ ಲಸಿಕೆ ಒಂದು ಹಂತಕ್ಕೆ ಬಂದಿದ್ದು ಸದ್ಯದರಲ್ಲಿಯೇ ಜನರ ಕೈ ಸೇರಲಿದೆ ಇದರ ಬೆನ್ನಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಬಿಪಿಎಲ್ ಕುಟುಂಬಗಳಿಗೆ ಉಚಿತ ಕೊರೊನಾ ಲಸಿಕೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ವಿಶ್ವ ಏಡ್ಸ್ ದಿನದ ಅಂಗವಾಗಿ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, 1980 ರಿಂದ ವಿಶ್ವದಲ್ಲಿ ಏಡ್ಸ್ ರೋಗಕ್ಕೆ ಸುಮಾರು 18 ಲಕ್ಷ ಜನರು ಸಾವಿಗೀಡಾಗಿದ್ದಾರೆ.

ಏಡ್ಸ್ ರೋಗಕ್ಕೆ ಇದುವರೆಗೂ ಔಷಧಿ ಕಂಡು ಹಿಡಿದಿಲ್ಲ. ಆದರೆ, ಏಡ್ಸ್ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತಿರುವುದರಿಂದ ಏಡ್ಸ್ ರೋಗ ಹರಡುವಿಕೆ ಪ್ರಮಾಣ ಕಡಿಮೆಯಾಗಿದೆ ಎಂದು ಹೇಳಿದರು.

ಈಗ ವಿಶ್ವದಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದೆ. ಭಾರತದಲ್ಲಿ ಕೊರೊನಾ ನಿಯಂತ್ರಣ ಯಶಸ್ವಿಯಾಗಿ ನಡೆಯುತ್ತಿದೆ.

ಕೊರೊನಾ ಸೋಂಕಿಗೆ ಲಸಿಕೆ ಕಂಡು ಹಿಡಿಯಲಾಗುತ್ತಿದ್ದು, ಮೊದಲ ಹಂತದಲ್ಲಿ ಸುಮಾರು 10 ಕೋಟಿ ಜನರಿಗೆ ಇದರ ಪ್ರಯೋಜನ ದೊರೆಯಲಿದೆ.

ಸ್ವತಃ ಪ್ರಧಾನಿ ನರೇಂದ್ರ ಮೋದಿ ಇದರ ಜವಾಬ್ದಾರಿ ಹೊತ್ತಿದ್ದು, ದೇಶದ ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.

Edited By : Nirmala Aralikatti
PublicNext

PublicNext

01/12/2020 02:24 pm

Cinque Terre

65.51 K

Cinque Terre

24

ಸಂಬಂಧಿತ ಸುದ್ದಿ