ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ತಗ್ಗಿದ ಕೊರೊನಾ ಹಾವಳಿ : ಇಂದು1,247 ಮಂದಿಗೆ ಅಂಟಿದ ಸೋಂಕು

ಬೆಂಗಳೂರು: ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿದ ಡೆಡ್ಲಿ ಸೋಂಕು ಕೊರೊನಾ ದಿನದಿಂದ ದಿನಕ್ಕೆ ತನ್ನ ಕಂಟ್ರೋಲ್ ಕಳೆದುಕೊಳ್ಳುತ್ತಿದೆ.

ಸಮಾಧಾನದ ಸಂಗತಿ ಎಂದರೆ ಹೊಸ ಕೇಸ್ ದಾಖಲಾಗುವಿಕೆಯಲ್ಲಿ ಇಳಿಕೆಯಾಗಿದೆ.

ಇಂದು ರಾಜ್ಯದಲ್ಲಿ 1,247 ಹೊಸ ಕೇಸ್ ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 8,90,360ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 13 ಮಂದಿ ಸಾವನ್ನಪ್ಪಿದ್ದಾರೆ.

ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 11,834 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 877 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಇದುವರೆಗೂ 8,53,461 ಮಂದಿ ಚೇತರಿಸಿಕೊಂಡಿದ್ದಾರೆ.

ಇನ್ನು 25,046 ಸಕ್ರೀಯ ಪ್ರಕರಣಗಳಿದ್ದು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು 620 ಮಂದಿಗೆ ಸೋಂಕು ದೃಢಪಟ್ಟಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 3,72,582ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 8 ಮಂದಿ ಬಲಿಯಾಗಿದ್ದಾರೆ.

ಇದರೊಂದಿಗೆ ನಗರದಲ್ಲಿ ಒಟ್ಟಾರೆ 4,170 ಮಂದಿ ಬಲಿಯಾಗಿದ್ದಾರೆ.

Edited By : Nirmala Aralikatti
PublicNext

PublicNext

04/12/2020 09:11 pm

Cinque Terre

59.54 K

Cinque Terre

0