ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 36,011 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 96,44,222ಕ್ಕೆ ಏರಿಕಾರಿಗೆ.
ಇದೇ ಅವಧಿಯಲ್ಲಿ ದೇಶಾದ್ಯಂತ 482 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 1,40,182ಕ್ಕೆ ತಲುಪಿದೆ. ಕೊರೊನಾದಿಂದ ಈವರೆಗೆ 91,00,792 ಜನರು ಚೇತರಿಸಿಕೊಂಡಿದ್ದಾರೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 4,03,248 ಆಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
PublicNext
06/12/2020 11:13 am