ನವದೆಹಲಿ: ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿದ ಡೆಡ್ಲಿ ಸೋಂಕು ಕೊರೊನಾ ಜನರ ಜೀವ ಹಿಂಡಿ ಹಿಪ್ಪೆ ಮಾಡಿದೆ.
ಸದ್ಯ ಸೋಂಕು ಸದೆಬಡಿಯುವಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ದೊಡ್ಡಮಟ್ಟದ ಕ್ರಾಂತಿಯೇ ನಡೆಯುತ್ತಿದ್ದು ಸೋಂಕಿಗೆ ಮದ್ದು ಅರೆಯುವ ಕಾರ್ಯ ಬಹುತೇಕ ಪೂರ್ಣಗೊಂಡಿದೆ.
ಪ್ರಾಯೋಗಿಕ ಹಂತದಲ್ಲಿ ವೃದ್ಧರು ಸೇರಿ ಸುಮಾರು 30 ಕೋಟಿ ಮೊದಲ ಆದ್ಯತೆಯ ಜನರಿಗೆ ಮುಂದಿನ 6 ರಿಂದ 8 ತಿಂಗಳಲ್ಲಿ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಬೃಹತ್ ಯೋಜನೆ ಹಾಕಿಕೊಂಡಿದೆ.
29 ಸಾವಿರ ಕೋಲ್ಡ್ ಸ್ಟೋರೇಜ್ ಗಳನ್ನು ಈಗಾಗಲೇ ಸಿದ್ಧಪಡಿಸಿಕೊಂಡಿರುವ ಸರ್ಕಾರ, ವ್ಯಾಕ್ಸಿನೇಷನ್ ಪ್ರಕ್ರಿಯೆ ನಡೆಸಲು ಚಿಂತನೆ ನಡೆಸಿದೆ.
ಈ ಕುರಿತ ನಿಯಮಗಳನ್ನು ರಾಜ್ಯಗಳಿಗೆ ಕೇಂದ್ರ ಸರ್ಕಾರ ಈಗಾಗಲೇ ನೀಡಿದೆ ಎಂದು ತಿಳಿದುಬಂದಿದೆ.
ಲಸಿಕೆ ಪಡೆದ ಪ್ರತಿಯೊಬ್ಬರಿಗೂ ಸುಮಾರು 30 ನಿಮಿಷಗಳ ಕಾಲ ಕೋಣೆಯಲ್ಲಿ ವಿಶ್ರಾಂತಿ ಪಡೆಯಲು ಸೂಚಿಸಲಾಗುತ್ತದೆ.
ಒಂದು ವೇಳೆ ಅವರ ಆರೋಗ್ಯದಲ್ಲಿ ಏನಾದರೂ ವ್ಯತ್ಯಾಸ ಉಂಟಾದರೆ ತಕ್ಷಣ ಚಿಕಿತ್ಸೆ ನೀಡುವ ಸಲುವಾಗಿ ಸಮೀಪದ ಆಸ್ಪತ್ರೆಗಳನ್ನು ಗುರುತಿಸಿಟ್ಟುಕೊಳ್ಳಲಾಗುತ್ತದೆ.
ಪ್ರತಿ ವ್ಯಾಕ್ಸಿನೇಷನ್ ಕೇಂದ್ರದಲ್ಲಿ ದಿನವೊಂದಕ್ಕೆ ಸುಮಾರು 100 ಮಂದಿಗೆ ಲಸಿಕೆ ನೀಡಲಾಗುತ್ತದೆ.
ಲಸಿಕೆ ಖರೀದಿಯ ಬೆಲೆ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎನ್ನಲಾಗಿದೆ.
PublicNext
13/12/2020 07:25 am