ಬೆಂಗಳೂರು: ರಾಜ್ಯದಲ್ಲಿ ಇಂದು 1,196 ಮಂದಿಗೆ ಕೊರೊನಾ ಸೋಂಕು ದೃಢವಾಗಿದ್ದು, 5 ಜನ ಬಲಿಯಾಗಿದ್ದಾರೆ.
ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 9,01,410ಕ್ಕೆ ಏರಿಕೆಯಾದರೆ, ಇಲ್ಲಿವರೆಗೂ ಹೆಮ್ಮಾರಿಗೆ 11,944 ಮಂದಿ ಕೊರೊನಾಗೆ ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು 2,036 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದರೆ, ಈವರೆಗೆ 8,72,038 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 17,409 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ.
PublicNext
13/12/2020 07:46 pm