ತಿರುವನಂತಪುರಂ : ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಡೆಡ್ಲಿ ಸೋಂಕು ಕೊರೊನಾಗೆ ಮದ್ದು ರೆಡಿಯಾಗಿದೆ.
ಲಸಿಕೆ ಲಭ್ಯತೆಯ ಬಗ್ಗೆ ಖಚಿತವಾಗುತ್ತಿದ್ದಂತೆ ಕೇರಳದಲ್ಲಿ ಎಲ್ಲರಿಗೂ ಉಚಿತವಾಗಿ ಕೋವಿಡ್ -19 ಲಸಿಕೆ ಲಭ್ಯವಾಗುವಂತೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಕಣ್ಣೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪಿಣರಾಯಿ ವಿಜಯನ್ ಕೋವಿಡ್ ಲಸಿಕೆ ಉಚಿತವಾಗಿ ನೀಡಲಾಗುವುದು.
ಇದು ಸರ್ಕಾರದ ನಿಲುವು ಎಂದು ಹೇಳಿದ್ದಾರೆ. ತಮಿಳುನಾಡು ಮತ್ತು ಮಧ್ಯಪ್ರದೇಶ ಈಗಾಗಲೇ ಉಚಿತ ಕೋವಿಡ್ ಲಸಿಕೆ ನೀಡುವುದಾಗಿ ಘೋಷಿಸಿವೆ.
ಭಾರತ್ ಬಯೋಟೆಕ್, ಸೆರಂ ಇನ್ಸಿಟ್ಯೂಟ್ ಆಫ್ ಇಂಡಿಯಾ ಮತ್ತು ಫೈಜರ್ ಕಂಪನಿ ಅಭಿವೃದ್ಧಿಪಡಿಸಿರುವ ಕೋವಿಡ್ ಲಸಿಕೆಗಳು ಭಾರತದ ಔಷಧ ನಿಯಂತ್ರಣ ಸಂಸ್ಥೆಯ ಪರಿಗಣನೆಯಲ್ಲಿದೆ.
ದೇಶದಲ್ಲಿ 5 ಲಸಿಕೆಗಳು ಕ್ಲಿನಿಕಲ್ ಟ್ರಯಲ್ ನ ವಿವಿಧ ಹಂತದಲ್ಲಿವೆ.
ಆದಾಗ್ಯೂ, ಕೇಂದ್ರ ಸರ್ಕಾರ ಕೇರಳಕ್ಕೆ ಎಷ್ಟು ಪ್ರಮಾಣದಲ್ಲಿ ಲಸಿಕೆ ನೀಡಲಿದೆ ಎಂಬುದು ತಿಳಿದಿಲ್ಲ ಎಂದು ಪಿಣರಾಯಿ ಹೇಳಿದ್ದಾರೆ.
PublicNext
14/12/2020 11:45 am